ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕಳೆದ ವಾರವಷ್ಟೇ ಒಂದೇ ದಿನದಲ್ಲಿ 24ರೋಗಿಗಳು ಸಾವನ್ನಪ್ಪಿದ್ದ ಬೆನ್ನಲ್ಲೇ ಇದೀಗ ಮತ್ತೆ 20 ರೋಗಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ 13 ರೋಗಿಗಳು ಕೊರೊನಾ ಸೋಂಕಿತರಾಗಿದ್ದು, 7 ಜನ ಇತರ ರೋಗಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿತರು ಕೊನೇ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂಬುದು ವೈದ್ಯರ ವಾದ.
ಲಸಿಕೆ ವಿತರಣೆ ಬಗ್ಗೆ ಸಚಿವರಿಂದ ಭರ್ಜರಿ ಸಿಹಿ ಸುದ್ದಿ: ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದವಾರ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮತ್ತೆ 10 ರೋಗಿಗಳು ಸಾವನ್ನಪ್ಪಿದ್ದರೆ ಮೊನ್ನೆ ಕೂಡ 9 ರೋಗಿಗಳು ಮೃತಪಟ್ಟಿದ್ದರು. ಇದೀಗ ಮತ್ತೆ 20 ರೋಗಿಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.