ವಿಜಯಪುರ: ಕೊರೊನಾ ಕರ್ತವ್ಯ ಪಾಲನೆ ಮಾಡಬೇಕಾದ ಜಿಲ್ಲಾ ಆರೋಗ್ಯಾಧಿಕಾರಿ ಪದೇ ಪದೇ ಕರ್ತವ್ಯ ನಿರ್ಲಕ್ಷಿಸಿ ಬೇಜವಾಬ್ದಾರಿ ಮೆರೆದ ಕಾರಣಕ್ಕೆ ಸರ್ಕಾರ ಕಡ್ಡಾಯ ರಜೆ ಶಿಕ್ಷೆ ನೀಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಆರೋಗ್ಯಾಧಿಕಾರಿ ರಾಜಕುಮಾರ್ ಯರಗಲ್ ಕೋವಿಡ್ ಕರ್ತವ್ಯದಲ್ಲಿ ನಿರ್ಲಕ್ಷ್ಯ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ್ 4 ಬಾರಿ ನೋಟೀಸ್ ನೀಡಿ ಎಚ್ಚರಿಕೆ ನೀಡಿದ್ದರು. ಆದಾಗ್ಯೂ ಎಚ್ಚೆತ್ತುಕೊಳ್ಳದ ಡಿಹೆಚ್ಒ ರಾಜಕುಮಾರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.
ಕೋವಿಡ್ ಕಾರಣದಿಂದ ಕೆಲಸ ಕಳೆದುಕೊಂಡಿದ್ದರೂ ಸಿಗುತ್ತೆ 3 ತಿಂಗಳ ಸಂಬಳ….! ಇಲ್ಲಿದೆ ಅದರ ಮಾಹಿತಿ
ಕೊರೊನಾ ಸೋಂಕಿನಿಂದ ಜನರು ಚಿಕಿತ್ಸೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಇಲ್ಲದೇ ಸಾವನ್ನಪ್ಪುತ್ತಿದ್ದರೂ ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯ ಮುಂದುವರೆದಿದೆ. ಸರ್ಕಾರದ ಸೂಚನೆಗಳಿಗೂ ಅಧಿಕಾರಿಗಳು ಬಗ್ಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೇರೆ ದಾರಿ ಕಾಣದೇ ಸರ್ಕಾರ ಆರೋಗ್ಯಾಧಿಕಾರಿಗೆ ಕಡ್ಡಾಯ ರಜೆ ಶಿಕ್ಷೆ ನೀಡಿದೆ.