alex Certify 4 ವರ್ಷಗಳ ಸೆರೆವಾಸ ಅಂತ್ಯ; ಜೈಲಿನಿಂದ ಬಿಡುಗಡೆಗೊಂಡ ಶಶಿಕಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ವರ್ಷಗಳ ಸೆರೆವಾಸ ಅಂತ್ಯ; ಜೈಲಿನಿಂದ ಬಿಡುಗಡೆಗೊಂಡ ಶಶಿಕಲಾ

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ 4 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ ಅವರ ಶಿಕ್ಷೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಯಾಗಿದ್ದಾರೆ. ಆದರೆ ಶಶಿಕಲಾ ಅವರಿಗೆ ಕೊರೊನಾ ಸೋಂಕು ಇರುವುದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಶಿಕಲಾ ಅವರು ಇಂದು ಬಿಡುಗಡೆಯಾಗಿದ್ದರೂ ಕೂಡ ಅವರು ಮನೆಗೆ ಮರಳಲು ಅವಕಾಶವಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಇನ್ನೂ 8 ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಇದೆ ಎನ್ನಲಾಗಿದೆ.

ರೈತರ ಬೆಂಬಲಕ್ಕೆ ನಿಂತ ನಟಿ ಸ್ವರಾ ಭಾಸ್ಕರ್‌

ಶಶಿಕಲಾ ಬಿಡುಗಡೆ ಹಿನ್ನೆಲೆಯಲ್ಲಿ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನಿಡಿದ್ದಾರೆ. ಇನ್ನೊಂದೆಡೆ ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ಅವರ ಅಪಾರ ಅಭಿಮಾನಿಗಳು ನೆರೆದಿದ್ದು, ಆಸ್ಪತ್ರೆಯ ಸುತ್ತ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...