ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ನಾಲ್ಕು ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ 2,928 ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದು, ಕೊರೊನಾ ವಾರಿಯರ್ಸ್, 60 ವರ್ಷ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತ 45 ವರ್ಷ ಮೇಲ್ಪಟ್ಟವರಿಗೆ ಈವರೆಗೆ ಲಸಿಕೆ ನೀಡಲಾಗಿತ್ತು. ಆದರೆ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಕಣ್ಣಂಚನ್ನು ತೇವಗೊಳಿಸುತ್ತೆ ಬಡ ಡೆಲಿವರಿ ಬಾಯ್ ಮನಕಲಕುವ ಕಥೆ
ಲಸಿಕೆ ಪಡೆಯುವವರು ನೇರವಾಗಿ ಲಸಿಕಾ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆದುಕೊಳ್ಳಬಹುದು. ಅಥವಾ ದಿನಾಂಕ ನಿಗದಿಪಡಿಸಿಕೊಳ್ಳಲು selfregistration.cowin.gov.in ಅಥವಾ ಆರೋಗ್ಯ ಸೇತು ಆಪ್ ಮೂಲಕ ನೊಂದಾಯಿಸಿಕೊಳ್ಳಬಹುದು.
ಲಸಿಕೆಯನ್ನು ಕೋವಿಡ್-19 ಲಸಿಕಾ ಕೇಂದ್ರಗಳ ಜೊತೆಗೆ ತಾಲೂಕು, ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಮೊದಲಾದ ಕಡೆ ನೀಡಲಾಗುತ್ತಿದ್ದು, ಲಸಿಕೆ ಪಡೆದುಕೊಳ್ಳುವಂತೆ ಕೋರಲಾಗಿದೆ.