ರಾಯಚೂರು: ಕಳೆದ ಅಕ್ಟೋಬರ್ ನಲ್ಲಿ ನಡೆದಿದ್ದ ಬಾಲಕನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನ್ನ ಭೋಗದ ಜೀವನಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ತಾಯಿ ತನ್ನ ಮಗನನ್ನೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದ 5 ತಿಂಗಳ ಹಿಂದೆ ರಾಯಚೂರಿನ ತುಂಗಭದ್ರಾ ಕಾಲುವೆಯಲ್ಲಿ 12 ವರ್ಷದ ಬಾಲಕನ ಶವ ಪತ್ತೆಯಾಗಿತ್ತು. ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ಮನೆ ಮುಂದಿನ ತುಂಗಭದ್ರಾ ಕಾಲುವೆಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಅನೈತಿಕ ಸಂಬಂಧಕ್ಕೆ ಮಗ ಅಡ್ಡಿಯಾಗುತ್ತಾನೆಂದು ತಾಯಿಯೇ ಮಗನ ಕೊಲೆ ಮಾಡಿರುವುದು ಗೊತ್ತಾಗಿದೆ.
ಅಲೆಗಳ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಕುಟುಂಬ ಸದಸ್ಯರು; ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ
ಪ್ರಕರಣ ಸಂಬಂಧ ಈಗಾಗಲೇ ಆರೋಪಿ ಮಹಿಳೆ, ಬಾಲಕನ ತಾಯಿ ಲಕ್ಷ್ಮೀ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಪತಿಯಿಂದ ದೂರವಿದ್ದ ಲಕ್ಷ್ಮೀ ಮಗನೊಂದಿಗೆ ವಾಸವಾಗಿದ್ದಳು. ಪಕ್ಕದ ಮನೆಯ ವ್ಯಕ್ತಿ ಹಾಗೂ ಮಾವನೊಂದಿಗೇ ಅನೈತಿಕ ಸಂಬಂಧವನ್ನು ಹೊಂದಿದ್ದು, ತನ್ನ ಭೋಗದ ಜೀವನಕ್ಕೆ ಮಗ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ತನ್ನ ಮಾವನ ಜೊತೆ ಸೇರಿ ಮಗನನ್ನೇ ಕಾಲುವೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.