ಬೆಂಗಳೂರು: ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಶನಿವಾರ ಮುಕ್ತಾಯಗೊಳಿಸಲು ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವರು, ಶಾಸಕರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮೂರು ದಿನಕ್ಕೆ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಸರ್ಕಾರ ಸಲ್ಲಿಸಿದ ಪ್ರಸ್ತಾಪಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, 6 ದಿನಗಳ ಕಾಲವಾದರೂ ಅಧಿವೇಶನ ನಡೆಸಬೇಕು ಎಂದು ಬೇಡಿಕೆ ಇಟ್ಟಿವೆ. ವಿಪಕ್ಷಗಳ ಒತ್ತಾಯಕ್ಕೆ ಮಣಿದು 6 ದಿನಗಳ ಕಾಲ ಅಂದರೆ ಶನಿವಾರದವರೆಗೂ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ನಡೆದ ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾನೂನು ಸಚಿವ ಮಾಧುಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.