alex Certify ಆಧಾರ್, ಡಿಎಲ್ ಹೊಂದಿದ ಆಟೋ ಚಾಲಕರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್, ಡಿಎಲ್ ಹೊಂದಿದ ಆಟೋ ಚಾಲಕರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಸರ್ಕಾರದ ವತಿಯಿಂದ 5 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಸಹಾಯಧನ ಪಡೆಯಲು ಆಟೋ ಚಾಲಕರಿಗೆ ಇದ್ದ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ.

ರಾಜ್ಯ ಸರ್ಕಾರದ 5 ಸಾವಿರ ರೂಪಾಯಿ ಸಹಾಯಧನ ಪಡೆಯಲು ಆಟೋ ಚಾಲಕರು ಸೇವಾಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಡ್ಜ್ ಹೊಂದಿರುವುದು ಕಡ್ಡಾಯ ಎಂದು ಹೇಳಲಾಗಿತ್ತು.

ಆದರೆ ಷರತ್ತುಗಳನ್ನು ಸಡಿಲಗೊಳಿಸಲಾಗಿದ್ದು, ಚಾಲನಾ ಪರವಾನಿಗೆ ಇದ್ದರೆ ಸಹಾಯಧನ ನೀಡಬಹುದು ಎಂದು ತಿಳಿಸಲಾಗಿದೆ. ಸಹಾಯಧಾನ ಪಡೆಯುವ ಆಟೋ ಚಾಲಕರಿಗೆ ಆಧಾರ್, ಪಾನ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ. ಅರ್ಜಿ ಸಲ್ಲಿಸಿದ ಆಟೋ ಚಾಲಕರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...