ಬೆಂಗಳೂರು: ಸರ್ಕಾರದ ನೆರವು ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಹಲವಾರು ಪ್ಯಾಕೇಜ್, ನೆರವಿನ ಯೋಜನೆ ಸದುಪಯೋಗ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ರೈತರು ಜೋಡಣೆ ಮಾಡಬೇಕು ಎಂದು ತಿಳಿಸಿದ್ದಾರೆ.
ಮೆಕ್ಕೆಜೋಳ ಮತ್ತು ಹೂವು ಬೆಳೆಗಾರರಿಗೆ ತಲಾ 5 ಸಾವಿರ ರೂಪಾಯಿಯಂತೆ ರಾಜ್ಯ ಸರ್ಕಾರದ ವತಿಯಿಂದ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಯೋಜನೆಗೆ ಚಾಲನೆ ನೀಡಿದ್ದು ಚಾಲ್ತಿಯಲ್ಲಿರುವ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಮೊತ್ತ ಜಮಾ ಆಗಿದೆ. ಆಧಾರ್ ಲಿಂಕ್ ಮಾಡದ ರೈತರು ಶೀಘ್ರವೇ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಸಚಿವರು ಮನವಿ ಮಾಡಿದ್ದಾರೆ.