
ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗೆ ಸಲ್ಲಿಕೆಯಾದ 2.90 ಲಕ್ಷ ಅರ್ಜಿಗಳು ನೆನೆಗುದಿಗೆ ಬಿದ್ದಿವೆ. ಆಹಾರ ಇಲಾಖೆಯ ಬಹುತೇಕ ಸಿಬ್ಬಂದಿ ಕೊರೋನಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕಾರಣದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.
ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಾಗಿ 2019 -20 ನೇ ಸಾಲಿನಲ್ಲಿ ಸುಮಾರು 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿ ವಿಲೇವಾರಿಗೆ ಬಾಕಿ ಉಳಿದಿವೆ.
ಆದರೆ ಪಡಿತರ ಚೀಟಿ ಇಲ್ಲವೆಂಬ ಕಾರಣಕ್ಕೆ ಪಡಿತರ ನಿಲ್ಲಿಸುವುದಿಲ್ಲ. ಆಧಾರ್ ಕಾರ್ಡ್ ಇದ್ದವರಿಗೆ ನವೆಂಬರ್ ವರೆಗೆ ಕೇಂದ್ರ ಸರ್ಕಾರದ ನಿಯಮದಂತೆ ಪಡಿತರ ನೀಡಲಾಗುವುದು ಎಂದು ಹೇಳಲಾಗಿದೆ.