ಬೆಂಗಳೂರು: ಸುಮಾರು 4500 ಕೊರೊನಾ ಸೋಂಕಿತರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯ ಸಂದರ್ಭದಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಈ ಕುರಿತಾಗಿ ಸೂಚನೆ ನೀಡಿದ್ದಾರೆ. ಕೊರೊನಾ ಸೋಂಕು ಪರೀಕ್ಷೆ ಸಂದರ್ಭದಲ್ಲಿ ತಪ್ಪು ವಿಳಾಸ ನೀಡಿ ನಾಪತ್ತೆಯಾದವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವೋಟರ್ ಐಡಿ, ಆಧಾರ್ ಕಾರ್ಡ್ ಅಥವಾ ಇತರೆ ವಿಳಾಸದ ದಾಖಲೆಗಳೊಂದಿಗೆ ಓಟಿಪಿ ಸಂಖ್ಯೆ ಪಡೆಯುವುದನ್ನು ಕಡ್ಡಾಯಗೊಳಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ಪರೀಕ್ಷೆ ವೇಳೆ ಆಧಾರ್ ಸೇರಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ತಿಳಿಸಿದ್ದಾರೆ.