ಬಾಗಲಕೋಟೆ: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಇಂಜಿನಿಯರ್ ಅಶೋಕ ಅವರ ಮನೆ ಮತ್ತು ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಇಂಜಿನಿಯರ್ ಆಗಿರುವ ಅಶೋಕ ಅವರ ವಿದ್ಯಾಗಿರಿಯ 8ನೇ ಕ್ರಾಸ್ ನಿವಾಸ, 17ನೇ ಕ್ರಾಸ್ ನಲ್ಲಿ ಇರುವ ಗ್ಯಾಸ್ ಏಜೆನ್ಸಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಚೇರಿ ಸೇರಿ ಮೂರು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.
ಎಸಿಬಿ ಡಿವೈಎಸ್ಪಿ ಗಣಪತಿ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.