ಬೆಂಗಳೂರು: ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುವಾಗ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.
ಜಿಕೆವಿಕೆ ಸಮೀಪ ನಡೆದ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದ ತೀವ್ರತೆಗೆ ಬೈಕುಗಳು ಜಖಂಗೊಂಡಿವೆ. ಆದಿಲ್ ಐಯಾನ್, ಸೈಯದ್ ರಿಯಾಜ್, ಮಾಜ್ ಅಹ್ಮದ್ ಖಾನ್ ಮೃತಪಟ್ಟವರು ಎಂದು ಹೇಳಲಾಗಿದೆ.
ನಾಗವಾರ ಸಮೀಪದ ಗೋವಿಂದಪುರ ನಿವಾಸಿಗಳಾಗಿರುವ ಇವರು ಹೆಲ್ಮೆಟ್ ಧರಿಸದೆ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಾ ಅತಿ ವೇಗವಾಗಿ ಬೈಕ್ ಚಾಲನೆ ಮಾಡುವಾಗ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಬೈಕುಗಳು ಜಖಂಗೊಂಡಿದೆ. ಸ್ಥಳಕ್ಕೆ ಯಲಹಂಕ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.