ಕೋಲಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾವತಿಯಿಂದ 2020-21 ನೇ ಸಾಲಿನಲ್ಲಿ ಸಾಧನೆ ಯೋಜನೆಯಡಿ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳುವ ವಿಕಲಚೇತನ ಕ್ರೀಡಾಪಟುಗಳಿಗೆ ಪ್ರಯಾಣ ವೆಚ್ಚ ಹಾಗೂ ಅಗತ್ಯವಿರುವ ಪೋಷಾಕುಗಳು, ಬೂಟ್ಸ್ ಖರೀದಿ, ವೀಸಾ ಶುಲ್ಕಗಳನ್ನು ಭರಿಸಲು 50 ಸಾವಿರ ರೂ. ವರೆಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ನವೆಂಬರ್ 23 ರ ಒಳಗಾಗಿ ಜಿಲ್ಲಾ ಕಛೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಇಲಾಖೆ ದೂರವಾಣಿ ಸಂಖ್ಯೆ 08152-228250,228251 ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ನೆಲಮಹಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೋರ್ಟ್ ಹತ್ತಿರ, ಕೋಲಾರ ಇವರನ್ನು ಸಂಪರ್ಕಿಸಬಹುದು ಎಂದು ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.