ಬೆಂಗಳೂರು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಕಿಡಿಗೇಡಿಗಳು ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಧ್ವಂಸ ಮಾಡಿದ್ದಾರೆ. ಜನನಿಬಿಡ ಪ್ರದೇಶ ಅದರಲ್ಲೂ ಮೆಟ್ರೋ ನಿಲ್ದಾಣದ ಬಳಿಯೇ ಈ ದುರ್ಘಟನೆ ನಡೆದಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.
ಈ ಹಿಂದೆ ಕೂಡ ಇದೇ ಜಾಗದಲ್ಲಿ ದುಷ್ಕರ್ಮಿಗಳು ವಿಷ್ಣುವರ್ಧನ್ ಅವರ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಇದೀಗ ಎರಡನೇ ಬಾರಿಗೆ ಪ್ರತಿಮೆಯನ್ನೇ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದಾರೆ.