ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಗುಡ್ ಬಾಯ್ ಹೇಳ್ತಾರಾ ಎಂಬ ಅನುಮಾನ ಎಲ್ಲರಲ್ಲೂ ಶುರುವಾಗಿದೆ. ಇದಕ್ಕೆ ಕಾರಣ ಇತ್ತೀಚೆಗೆ ಅವರು ಫೇಸ್ಬುಕ್ನಲ್ಲಿ ಹಾಕಿಕೊಂಡಿದ್ದ ಪೋಸ್ಟ್. ಈ ಪೋಸ್ಟ್ನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಹಾಗೂ ಅನ್ನದಾತರ ಬಗ್ಗೆ ಮಾತನಾಡಿದ್ದಾರೆ.
ಹೌದು, ಇತ್ತೀಚೆಗಷ್ಟೆ ವೈವಾಹಿಕ ಬದುಕಿಗೆ ಕಾಲಿಟ್ಟ ನಿಖಿಲ್ ಹೊಸ ಪ್ರಯತ್ನವೊಂದಕ್ಕೆ ಕೈ ಹಾಕುತ್ತಿದ್ದಾರೆ, ಈ ಬಗ್ಗೆ ವಿಸ್ತೃತವಾಗಿ ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ ನಿಖಿಲ್. ನಾನು ಸಹ ರೈತನ ಮಗನಾಗಿದ್ದು ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ ಎಂದು ನಿಖಿಲ್ ಕುಮಾರಸ್ವಾಮಿ ಹಾರೈಸಿದ್ದಾರೆ.
ನಿಖಿಲ್ ಅವರ ಈ ಬೆಳವಣಿಗೆ ನೋಡಿದ ಅನೇಕ ಮಂದಿ ಅಪ್ಪನಂತೆ ಮಗ ರಾಜಕೀಯಕ್ಕೆ ಬರುವುದಿಲ್ಲವೇನೋ ಎಂದು ಊಹೆ ಮಾಡುತ್ತಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಚುನಾವಣೆಗಳು ಇಲ್ಲ. ಹಾಗಾಗಿ ಕೃಷಿಯ ಮೂಲಕ ಅನೇಕರಿಗೆ ಮಾದರಿಯಾಗುವ ಕೆಲಸಕ್ಕೆ ನಿಖಿಲ್ ಕೈ ಹಾಕುತ್ತಿದ್ದಾರೆ.
https://www.facebook.com/iamNikhilGowda/posts/2806309806141862