ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟಂಬರ್ 14 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನೈಋತ್ಯ ಮುಂಗಾರು ಕರಾವಳಿ ಭಾಗದಲ್ಲಿ ತೀವ್ರಗೊಂಡು ಒಳನಾಡು ಜಿಲ್ಲೆಗಳಲ್ಲಿ ಚುರುಕಾಗಿದೆ. ಇನ್ನೂ ಎರಡು, ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದ್ದು 10 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಒಳನಾಡಿನ ಯಾದಗಿರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶದಲ್ಲಿ ವೇಗದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.