ಏರ್ ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೆ ಎರಡು ಬಾರಿ ಪ್ರತ್ಯುತ್ತರ ನೀಡಲಾಗಿದೆ. ಇದರಿಂದಾಗಿ ಪಾಕ್ ಪ್ರಚೋದಿತ ಭಯೋತ್ಪಾದನೆ ನಿಂತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಉರಿ ಮತ್ತು ಪುಲ್ವಾಮಾ ಮೇಲೆ ದಾಳಿ ಮಾಡಿದ್ದರು. ಈಗ ಇರೋದು ಸಿಂಗ್ ಸರ್ಕಾರ ಅಲ್ಲ, ನರೇಂದ್ರ ಮೋದಿ ಸರ್ಕಾರ. ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುತ್ತದೆ. ಏರ್ ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ಬಳಿಕ ಪಾಕಿಸ್ತಾನ ಈಗ ಹತ್ತಿರಕ್ಕೂ ಸುಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.
ಭಾರತ ಕೊರೊನಾ ವಿರುದ್ಧ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಕೊರೋನಾದಿಂದ ವಿಶ್ವವೇ ಸಂಕಷ್ಟಕ್ಕೆ ಸಿಲುಕಿತ್ತು. ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಅಗತ್ಯ ವಸ್ತು ಪೂರೈಕೆ ಮಾಡಲಾಗಿದೆ. ಆದರೂ ಕಾಂಗ್ರೆಸ್ ನವರು ಇದನ್ನು ವಿರೋಧ ಮಾಡುತ್ತಾರೆ. ನಾನು ಕಾಂಗ್ರೆಸ್ ನಾಯಕರಿಗೆ ಒಂದು ಮಾತು ಕೇಳ ಬಯಸುತ್ತೇನೆ. ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರ ಆಡಳಿತದಲ್ಲಿ ಕರ್ನಾಟಕಕ್ಕೆ ಏನು ಕೊಟ್ಟಿದ್ದೀರಿ ಎಂಬುದರ ಲೆಕ್ಕ ಕೊಡಿ ಎಂದು ಕಾಂಗ್ರೆಸ್ ನಾಯಕರಿಗೆ ಅಮಿತ್ ಶಾ ಪ್ರಶ್ನಿಸಿದ್ದಾರೆ.