alex Certify BIG NEWS: ಕುಟುಂಬದ ಮೂವರಿಗೆ ಕೊರೋನಾ, ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್ – ಕರೆಮಾಡಿ ವಿಚಾರಿಸಿದ ಅಮಿತ್ ಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಟುಂಬದ ಮೂವರಿಗೆ ಕೊರೋನಾ, ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್ – ಕರೆಮಾಡಿ ವಿಚಾರಿಸಿದ ಅಮಿತ್ ಶಾ

ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ತಂದೆ, ಪತ್ನಿ ಮತ್ತು ಪುತ್ರಿಗೆ ಕೊರೊನಾ ಸೋಂಕು ತಗಲಿದ್ದು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಎಲ್ಲರಿಗೂ ಕ್ವಾರಂಟೈನ್ ನಲ್ಲಿರುವ ಸುಧಾಕರ್ ಧನ್ಯವಾದ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ದೂರವಾಣಿ ಕರೆಮಾಡಿ ವಿಚಾರಿಸಿದ್ದಾರೆ.

ಸುಧಾಕರ್ ಅವರ ಕುಟುಂಬದವರಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಮಾಹಿತಿ ಪಡೆದ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ ಸುಧಾಕರ್ ಅವರ ತಂದೆ, ಪತ್ನಿ ಮತ್ತು ಪುತ್ರಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ತಮ್ಮ ಕೆಲಸ ಕಾರ್ಯಗಳ ನಡುವೆಯೂ ಸುಧಾಕರ್ ಮತ್ತು ಅವರ ಕುಟುಂಬದವರ ಬಗ್ಗೆ ಕಾಳಜಿ ತೋರಿ ಶುಭಹಾರೈಸಿದ್ದಾಗಿ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...