alex Certify ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿಗೆ ಅರ್ಜಿ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಆನ್‍ಲೈನ್ ಮೂಲಕ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದ್ದು, ಲಾಕ್‍ಡೌನ್ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಸುವಿಕೆಯ ಅವಧಿಯನ್ನು ಮೇ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹಗರಿಬೊಮ್ಮನಹಳ್ಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಹರಡದಂತೆ ದೇಶದ್ಯಾಂತ ಲಾಕ್‍ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿದೆ. ಅರ್ಹ ಮಹಿಳಾ ಅಭ್ಯರ್ಥಿ ಅರ್ಜಿಯನ್ನು ಆನ್‍ಲೈನ್ www.anganwadirecruit.kar.nic.in ರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಈ ಹಿಂದೆ ಅರ್ಜಿ ಸಲ್ಲಿಸಲು ಏ.4 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಅವಧಿ ವಿಸ್ತರಣೆ: ಬಳ್ಳಾರಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ 1 ಅಂಗನವಾಡಿ ಕಾರ್ಯಕರ್ತೆ, 13 ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಲಾಕ್‍ಡೌನ್ ಮಾಡಿರುವ ಪ್ರಯುಕ್ತ ಅರ್ಜಿ ಸಲ್ಲಿಸಲು ಮೇ 30ರ ವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು www.anganwadirecruit.kar.nic.in ಮೂಲಕ ಸಲ್ಲಿಸಬೇಕು. ಲಕೋಟೆಯಿಂದ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಲಬ್ ರಸ್ತೆ, ದೇವಿನಗರ, ಬಳ್ಳಾರಿ ಕಚೇರಿಗೆ ಅಥವಾ ದೂ.ಸಂ. 08392-268609 ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...