alex Certify ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ: ಹೊಳೆನರಸೀಪುರ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಾಚನಹಳ್ಳಿ, ಹುಚ್ಚನಕೊಪ್ಪಲು, ಮಂಗಳವಾಡಿ ಅಂಗನವಾಡಿಯಲ್ಲಿ ಕಾರ್ಯಕರ್ತೆ ಮತ್ತು ಪಡುವಲಹಿಪ್ಪೆ  ಹಿರೇಹಳ್ಳಿ ಜಾಕನಹಳ್ಳಿ ನಗರನಹಳ್ಳಿ .ವಿದ್ಯುತ್ ನಗರ (ಹೊಳೆನರಸೀಪುರ) ಕೆರಗೋಡು ಮೋಟನಾಯಕನಹಳ್ಳಿ  ದೊಡ್ಡಕುಂಚೆ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನವಾಗಿದ್ದು, ಅಂದು ಸಂಜೆ 5.30 ಗಂಟೆಯೊಳಗಾಗಿ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅದೇ ರೀತಿ ಆಲೂರು ತಾಲ್ಲೂಕಿನ ಗ್ರಾಮ ಅಥವಾ ವಾರ್ಡ್‍ಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಸಲುವಾಗಿ ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಆಲೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಖಾಲಿ ಇರುವ ಹುದ್ದೆಗಳ ವಿವರ: ಹಂಚೂರು ಗ್ರಾಮ ಪಂಚಾಯಿತಿ ಗಂಗರ ಅಂಗನವಾಡಿ ಕೇಂದ್ರ, ಸಾಣೇನಹಳ್ಳಿ, ರಾಜನಹಳ್ಳಿ, ಚಿಕ್ಕ ಕಣಗಾಲು, ಕರಡಿ ಬೆಟ್ಟ, ಚನ್ನಹಳ್ಳಿ, ಅಬ್ಬನ ಅಂಗನವಾಡಿ ಕೇಂದ್ರ, ಪಾಳ್ಯ ಪಶ್ಚಿಮ ಬಡಾವಣೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆಸಕ್ತರು ಆನ್‍ಲೈನ್ ಮೂಲಕ www.anganawadirecruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಲೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ: 08170-218220ಗೆ ಸಂಪರ್ಕಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...