alex Certify ಅನ್ನ ಭಾಗ್ಯ ಯೋಜನೆ: ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನ ಭಾಗ್ಯ ಯೋಜನೆ: ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಮೂರು ತಿಂಗಳ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿತ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಎರಡು ಕೆಜಿ ಅಕ್ಕಿಯನ್ನು ಕಡಿತಗೊಳಿಸಲಿದೆ ಎನ್ನಲಾಗಿದೆ.

ಪ್ರತಿ ತಿಂಗಳು ಬಿಪಿಎಲ್ ಕಾರ್ಡುದಾರರಿಗೆ 5 ಕೆಜಿ ವಿತರಿಸಲಾಗುತ್ತಿದೆ. ಈಗ 3 ಕೆಜಿ ಅಕ್ಕಿ ನೀಡಿ ಜೊತೆಗೆ 2 ಕೆಜಿ ರಾಗಿ ಇಲ್ಲವೇ ಜೋಳ ನೀಡಲಾಗುವುದು. ಆಯಾ ಪ್ರದೇಶಕ್ಕೆ ಅನುಗುಣವಾಗಿ ತಲಾ 2 ಕೆಜಿ ಗೋಧಿ, ರಾಗಿ ಅಥವಾ ಜೋಳ ನೀಡಲಾಗುವುದು.

ದಕ್ಷಿಣ ಕರ್ನಾಟಕದಲ್ಲಿ ರಾಗಿ ನೀಡಲಿದ್ದು ಉತ್ತರ ಕರ್ನಾಟಕದಲ್ಲಿ ಜೋಳ ವಿತರಿಸಲಾಗುವುದು. ಜುಲೈ 1 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ. ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 7 ಕೆಜಿ ಅಕ್ಕಿ ನೀಡುತ್ತಿದ್ದು, ಅದನ್ನು 5 ಕೆಜಿಗೆ ಇಳಿಕೆ ಮಾಡಲಾಗಿತ್ತು. ಈಗ ಮತ್ತೆ 2 ಕೆಜಿ ಕಡಿಮೆ ಮಾಡಿ ಬೇರೆ ಧಾನ್ಯ ವಿತರಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...