ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ವಹಿವಾಟಿನ ಮೇಲೆ ವಿಧಿಸುವ ಸೆಸ್ ಇಳಿಕೆ ಮಾಡುವ ಕುರಿತಂತೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿ ಬಳಿಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಕ್ತ ಅವಕಾಶವಿದೆ. ಆದರೆ ಬೇರೆ ಕಡೆ ಸೆಸ್ ವಿಧಿಸದ ಕಾರಣ ಎಪಿಎಂಸಿ ಸೆಸ್ ಕಡಿತ ಮಾಡುವಂತೆ ವರ್ತಕರು ಬೇಡಿಕೆ ಇಟ್ಟಿದ್ದು, ಇದನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಜುಲೈ 9ರಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಸೋಮಶೇಖರ್ ಭರವಸೆ ನೀಡಿದ್ದಾರೆ.