alex Certify ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ, ಕೊಳವೆ ಬಾವಿ ಹಾಗೂ ಭೂ ಒಡೆತನ ಯೋಜನೆಗಳ ಕಾರ್ಯಕ್ರಮಗಳಡಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ/ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯದ ಅರ್ಹ ಅಭ್ಯರ್ಥಿಗಳು ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‍ಸೈಟ್ https//kmvstdcl.karnataka.gov.in  ಮೂಲಕ ಅಥವಾ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ನಿಗಮದ ಜಿಲ್ಲಾ ಕಚೇರಿಯಲ್ಲಿ ಅಥವಾ ಆಗಸ್ಟ್ 31 ರೊಳಗಾಗಿ  ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0182-276776 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...