
ದಾವಣಗೆರೆ: 2019-20ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್‍ಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ದ್ವಿತೀಯ ಪಿಯುಸಿ, ಡಿಪ್ಲೊಮಾ, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ, ಬಿಇ, ಮೆಡಿಕಲ್ ಕೋರ್ಸ್‍ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್ ಗಳ ದೃಢೀಕೃತ ಪ್ರತಿ ಹಾಗೂ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಇಲಾಖಾ www.sw.kar.nic.in ಸಂರ್ಪಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.