alex Certify ಶಾಕಿಂಗ್: ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ವಿಜಯಪುರದ ಯೋಧ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ವಿಜಯಪುರದ ಯೋಧ ಸಾವು

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಬಡಿಗೇರ(31) ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯನಿರತರಾಗಿದ್ದ ವೇಳೆಯಲ್ಲೇ ಮೃತಪಟ್ಟಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವರು ಸಾವನ್ನಪ್ಪಿದ್ದು ಭಾರತೀಯ ಸೇನೆ ಅಧಿಕಾರಿಗಳು ದೂರವಾಣಿ ಕರೆಮಾಡಿ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಒಂದೂವರೆ ವರ್ಷದ ಹಿಂದೆಯಷ್ಟೇ ಶಿವಾನಂದ ಅವರ ಮದುವೆ ತಾಳಿಕೋಟೆ ತಾಲೂಕಿನ ತಂಬಗಿ ಗ್ರಾಮದ ಪುಷ್ಪಾ ಅವರೊಂದಿಗೆ ನೆರವೇರಿತ್ತು. ಬಾಂಗ್ಲಾ ಮತ್ತು ಚೀನಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿವಾನಂದ ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಅವರ ಸಾವಿನ ಸುದ್ದಿಯಿಂದ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಶಿವಾನಂದ ಅವರ ಪಾರ್ಥಿವ ಶರೀರವನ್ನು ಆದಷ್ಟು ಬೇಗ ತರಿಸುವಂತೆ ಕುಟುಂಬದವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...