ಬೆಂಗಳೂರು: ಆರೋಗ್ಯ ಸೇತು ಆಪ್, ವಿಮಾನ, ರೈಲು ಪ್ರಯಾಣಿಕರಿಗೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಂಪರ್ಕ ಪತ್ತೆ ಹಚ್ಚಲು ಆರೋಗ್ಯ ಸೇತು ಆಪ್ ರೂಪಿಸಲಾಗಿದೆ. ಈ ಮೊಬೈಲ್ ಆಪ್ ಅನ್ನು ವಿಮಾನ ಮತ್ತು ರೈಲು ಪ್ರಯಾಣಿಕರು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಹೇಳಲಾಗಿತ್ತು.
ಆದರೆ ಆಪ್ ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಬೆಂಗಳೂರಿನ ಅನಿರ್ವ ಎ. ಅರವಿಂದ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಈ ವೇಳೆ ಆರೋಗ್ಯ ಸೇತು ಆಪ್ ಕಡ್ಡಾಯವಲ್ಲ ಎಂದು ಹೇಳಲಾಗಿದೆ.