ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ ರಾಮಕೃಷ್ಣ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಗುರು ರಾಘವೇಂದ್ರ ಬ್ಯಾಂಕ್ ನಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಧ್ಯಕ್ಷ ರಾಮಕೃಷ್ಣರನ್ನು ಬಂಧಿಸಿದ್ದಾರೆ. ನಕಲಿ ದಾಖಲೆಗಳಿಂದ ಖಾತೆ ತೆರೆದು ವಂಚಿಸಲಾಗಿದ್ದು, ನೂರಾರು ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ರಾಮಕೃಷ್ಣ ಪರಾರಿಯಾಗಿದ್ದರು. ಅವರು ರಾಜ್ಯಸಭೆ ಚುನಾವಣೆಗೆ ಕೂಡ ಸ್ಪರ್ಧಿಸಿದ್ದರು ಎನ್ನಲಾಗಿದೆ.