
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ, ವಾಹನಗಳಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿ ಎಪಿಎಂಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೊರೋನಾ ಸೋಂಕಿತ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಗಲಾಟೆ ಮಾಡಿದ್ದು, ಸೋಂಕಿತ ಮೃತಪಟ್ಟ ಬಳಿಕ ಆಸ್ಪತ್ರೆ ಆವರಣದಲ್ಲಿ ದಾಂಧಲೆ ನಡೆಸಲಾಗಿತ್ತು.
ದಾಂಧಲೆ ವೇಳೆಯಲ್ಲಿ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದು, ನಿನ್ನೆ ರಾತ್ರಿ ನಡೆದಿದ್ದ ಘಟನೆ ಪೂರ್ವನಿಯೋಜಿತ ಕೃತ್ಯ ಎಂದು ಶಂಕಿಸಲಾಗಿದೆ. ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.