
ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ತುಂಗಾನಗರ ಠಾಣೆ ಪಿಎಸ್ಐ ತಿರುಮಲೇಶ್ ತಂಡ , ಇಬ್ಬರು ಗೋವು ಕಳ್ಳರನ್ನ ಬಂಧಿಸಿ ವಾಹನ ಹಾಗೂ ಹಸುಗಳನ್ನು ವಶಪಡಿಸಿಕೊಂಡಿದ್ದಾರೆ.
ಟಿಪ್ಪುನಗರ ನಿವಾಸಿಗಳಾದ ಮೊಹಮ್ಮದ್ ಹಾಗೂ ಚಾಂದ್ ಪೀರ್ ಬಂಧಿತರು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.