
ಬೆಂಗಳೂರು: 2020 21 ನೇ ಸಾಲಿನಲ್ಲಿ ಇದುವರೆಗೆ 9 ಲಕ್ಷ ರೈತರಿಗೆ ಬೆಳೆ ಸಾಲ ವಿತರಿಸಲಾಗಿದೆ ಎಂದು ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.
ಕಳೆದ ವರ್ಷ 22.58 ಲಕ್ಷ ರೈತರಿಗೆ ಸಾಲ ವಿತರಿಸಿದ್ದು ಈ ವರ್ಷ 24.50 ಲಕ್ಷ ರೈತರಿಗೆ 14,500 ಕೋಟಿ ರೂಪಾಯಿವರೆಗೆ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದ್ದು, ಇದುವರೆಗೆ 9 ಲಕ್ಷ ರೈತರಿಗೆ ಸಾಲ ವಿತರಿಸಲಾಗಿದೆ.
ಸಂಕಷ್ಟದ ಹಾದಿಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ 3,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ರಾಜ್ಯದ 42,608 ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡಲಾಗಿದೆ ಎಂದು ಹೇಳಲಾಗಿದೆ.