ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತೆಯರಿಗೆ ಸ್ತ್ರೀಶಕ್ತಿ ಸಂಘಗಳ ರೀತಿಯಲ್ಲೇ ಸಾಲ ವಿತರಣೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಿಗೆ ತಲಾ 50 ಸಾವಿರ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಅದೇ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.