ಬೆಳ್ತಂಗಡಿ ತಾಲೂಕಿನ ಬೆಳಾಲು ಸುರುಳಿ ಸಮೀಪ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಲೀಂ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಸಲೀಂ ಬೀಡಿ ಬ್ರಾಂಚ್ ನಲ್ಲಿ ಬೀಡಿ ತೆಗೆಯುವ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಯುವತಿಯ ಕೂಗಾಟ ಕೇಳಿ ಧಾವಿಸಿ ಬಂದ ಸ್ಥಳೀಯರು ಯುವತಿಯನ್ನು ರಕ್ಷಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹೇಳಲಾಗಿದೆ.