ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸತತ ಸಭೆ ನಡೆಸಿದ್ದಾರೆ.
ಪಕ್ಷದ ಪದಾಧಿಕಾರಿಗಳು ವಿವಿಧ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕುಳಿತುಕೊಳ್ಳದೇ ರಾಜ್ಯ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆಗೆ ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ತಿಳಿಸಲಾಗಿದ್ದು, ಇದಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಬಿ.ಎಲ್. ಸಂತೋಷ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.