ಮುಖ್ಯಮಂತ್ರಿಯಲ್ಲ, ಮಂತ್ರಿ ಅಲ್ಲ, ಸಂಸದರಲ್ಲ, ಶಾಸಕರಲ್ಲ, ಗ್ರಾಮ ಪಂಚಾಯಿತಿ ಸದಸ್ಯರೂ ಅಲ್ಲ, ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿರದ ಬಿ.ವೈ. ವಿಜಯೇಂದ್ರ ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ವಿಜಯೇಂದ್ರ ಅವರಿಗೆ ಸಭೆ ನಡೆಸುವ ಅಧಿಕಾರ ಕೊಟ್ಟವರು ಯಾರು? ಆಡಳಿತ ಯಂತ್ರದಲ್ಲಿ ಮೂಗು ತೂರಿಸಿದ ಈ ದಲ್ಲಾಳಿತನ ಪ್ರಜಾಪ್ರಭುತ್ವದ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವೈದ್ಯಾಧಿಕಾರಿಗಳ ತಂಡದೊಂದಿಗೆ ಮುಷ್ಕರ, ವೇತನ ಬೇಡಿಕೆ ವಿಚಾರವಾಗಿ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಿಡಿಕಾರಿದೆ.