alex Certify ಆಸ್ಪತ್ರೆ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಎದುರಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ. ಜೇವರ್ಗಿ ತಾಲ್ಲೂಕಿನ ಚೆನ್ನಮ್ಮ ಎಂಬುವರು ಇಂದು ಬೆಳಗ್ಗೆ ಹೆರಿಗೆ ನೋವಿನಿಂದ ಆಸ್ಪತ್ರೆಗೆ ಆಗಮಿಸಿದ ವೇಳೆ ದಾಖಲಿಸಿಕೊಳ್ಳಲು ಸಿಬ್ಬಂದಿ ವಿಳಂಬ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾತಿ ಮಾಡಿಕೊಳ್ಳಲು ಸಿಬ್ಬಂದಿ ಹಿಂದೇಟು ಹಾಕಿದ್ದಾರೆ ಎನ್ನಲಾಗಿದ್ದು, ವಿಳಂಬವಾಗಿದ್ದರಿಂದ ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಯ ಎದುರಲ್ಲೇ ಚೆನ್ನಮ್ಮ ಮಗುವಿಗೆ ಜನ್ಮ ನೀಡಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...