ಬಾಗಲಕೋಟೆ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಿದ್ದು ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇದರಿಂದಾಗಿ ಮನೆಯಲ್ಲಿಯೇ ಉಳಿದುಕೊಂಡ ಮಕ್ಕಳಿಗಾಗಿ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಮನೆಯಲ್ಲಿ ಇರುವ ಮಕ್ಕಳಿಗೆ ಪಠ್ಯ ಪುಸ್ತಕ ನೀಡುವ ಮೂಲಕ ಓದು-ಬರಹದ ಕಡೆ ಗಮನಹರಿಸುವಂತೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ರಾಜ್ಯಾದ್ಯಂತ ವಿದ್ಯಾರ್ಥಿಗಳ ಮನೆಬಾಗಿಲಿಗೆ ಪಠ್ಯಪುಸ್ತಕಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ಕೊರೊನಾ ಸೋಂಕು ನಿವಾರಣೆಯಾದ ನಂತರ ಶಾಲೆಗಳನ್ನು ಆರಂಭಿಸಬೇಕೆಂಬ ಒತ್ತಾಯ ಪೋಷಕರಿಂದ ಕೇಳಿಬಂದಿದೆ. ಸದ್ಯಕ್ಕೆ ಶಾಲೆ ಆರಂಭಿಸದಿರಲು ಸರ್ಕಾರ ಚಿಂತನೆ ನಡೆಸಿದೆ. 5ನೇ ತರಗತಿವರೆಗೆ ಆನ್ಲೈನ್ ಕ್ಲಾಸ್ ರದ್ದುಪಡಿಸಲಾಗಿದೆ.
ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪಠ್ಯಪುಸ್ತಕ ಸಂಘ ಬಹುತೇಕ ಅಗತ್ಯ ಪಠ್ಯಪುಸ್ತಕಗಳನ್ನು ಜಿಲ್ಲಾ ಕೇಂದ್ರಗಳಿಗೆ ತಲುಪಿಸಿದ್ದು, ಶೀಘ್ರವೇ ವಿದ್ಯಾರ್ಥಿಗಳ ಕೈಗೆ ಪಠ್ಯ ಪುಸ್ತಕಗಳು ಸೇರಲಿವೆ. ಸುಮಾರು 3 ತಿಂಗಳಿಂದ ಮನೆಯಲ್ಲಿರುವ ಮಕ್ಕಳಿಗೆ ಓದು-ಬರಹದತ್ತ ಸೆಳೆಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.