
ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಸವನಗರದಲ್ಲಿ ಅಪ್ರಾಪ್ತೆ ಮತ್ತು ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
23 ವರ್ಷದ ಯುವಕ ಮತ್ತು 15 ವರ್ಷದ ಅಪ್ರಾಪ್ತೆ ನೇಣಿಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ತನ್ನದೇ ಗ್ರಾಮದ ಬಾಲಕಿಯನ್ನು ಪ್ರೀತಿಸಿದ್ದಾನೆ.
ಬಸವನಗರದ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಆತ ಹುಡುಗಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಯುವ ಮೊದಲು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಮುಧೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.