ಬಾಗಲಕೋಟೆ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬಾದಾಮಿಯ ರಂಗನಾಥ ನಗರದಲ್ಲಿ ನಡೆದಿದೆ.
24 ವರ್ಷದ ಮಹಿಳೆಯನ್ನು ಆಕೆಯ ಪರಿ ಸಂದೀಪ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಸಂದೀಪ ತಾನೂ ತಲೆಗೆ ಕಲ್ಲಿನಿಂದ ಜಜ್ಜಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿಯಾಗಿರುವ ಸಂದೀಪ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ತವರುಮನೆ ಬಾದಾಮಿಗೆ ಬಂದಿದ್ದು ಮತ್ತೆ ಗರ್ಭಿಣಿಯಾಗಿದ್ದಾಳೆ. ಪತ್ನಿ ಅಕ್ರಮ ಸಂಬಂಧ ಹೊಂದಿರುವ ಕಾರಣದಿಂದ ಗರ್ಭಿಣಿಯಾಗಿದ್ದಾಳೆ ಎಂದು ಜಗಳವಾಡಿದ ಸಂದೀಪ್ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾದಾಮಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.