ಬಳ್ಳಾರಿ ಜಿಲ್ಲೆಯಲ್ಲಿ ಇಂದು 26 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ 12 ಮಂದಿ ಜಿಂದಾಲ್ ಕಂಪನಿಯ ನೌಕರರಾಗಿದ್ದಾರೆ.
ಇದರೊಂದಿಗೆ ಜಿಂದಾಲ್ ಕಂಪನಿಯಲ್ಲಿ ಸೋಂಕಿತರ ಸಂಖ್ಯೆ 252 ಕ್ಕೆ ಏರಿಕೆಯಾಗಿದ್ದು ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 442 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ತಡೆಗೆ ಜಿಲ್ಲಾಡಳಿತದಿಂದ ಎಲ್ಲಾ ಕ್ರಮಕೈಗೊಳ್ಳಲಾಗಿದೆ.