ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 579 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಂತರ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಕಂಡುಬಂದಿರುವುದು ಆತಂಕ ಮೂಡಿಸಿದೆ.
ಭಾನುವಾರ ಬಳ್ಳಾರಿ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದು ಇದುವರೆಗೆ 75 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 4046 ಜನರಿಗೆ ಕೊರೊನಾ ಸೋಂಕು ತಗಲಿದ್ದು 1622 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎನ್ನಲಾಗಿದೆ.