alex Certify ಕೊರೊನಾ ಹೊಡೆತಕ್ಕೆ ಬೆಚ್ಚಿಬಿದ್ದ ಬಳ್ಳಾರಿ, ಒಂದೇ ದಿನ 8 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಹೊಡೆತಕ್ಕೆ ಬೆಚ್ಚಿಬಿದ್ದ ಬಳ್ಳಾರಿ, ಒಂದೇ ದಿನ 8 ಮಂದಿ ಸಾವು

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇವತ್ತು ಒಂದೇ ದಿನ 8 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಬಳ್ಳಾರಿಯಲ್ಲಿ ಇವತ್ತು ಒಂದೇ ದಿನ 48 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 773 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 313 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 437 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...