ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದ್ದ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ 12 ವರ್ಷದ ಬಾಲಕಿ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದು ಕೊರೊನಾ ಸೋಂಕು ತಗುಲಿತ್ತು.
ಆಕೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಇದರೊಂದಿಗೆ ಬಳ್ಳಾರಿಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.