2 ವರ್ಷದ ಹೆಣ್ಣುಮಗುವಿನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಡು ಬೊಮ್ಮನಹಳ್ಳಿ ಬಳಿ ನಡೆದಿದೆ. ಬೋರಮ್ಮ(36) ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಗಂಡುಬೊಮ್ಮನಹಳ್ಳಿ ಸಮೀಪದ ಕೆರೆಗೆ ಹಾರಿ ದಿಬ್ಬದಹಳ್ಳಿಯ ಬೋರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2 ತಿಂಗಳ ಗಂಡು ಮಗುವನ್ನು ಮನೆಯಲ್ಲಿ ಬಿಟ್ಟು ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಗುಡೇಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.