
ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ನಾಟಕ ವಾಡಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.
ಕೊರೊನಾ ಸೋಂಕಿತರು ಭಾರೀ ಹೆಚ್ಚಾದ ಸಂದರ್ಭದಲ್ಲಿ ಹಾಸಿಗೆ ಮೀಸಲಿಡದೇ ಚಿಕಿತ್ಸೆ ನೀಡಲು ನಿರಾಕರಿಸಿದ್ದ ಆಸ್ಪತ್ರೆಗಳನ್ನು ಬಂದ್ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. 7 ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ಇವತ್ತು ಈ 7 ಆಸ್ಪತ್ರೆಗಳ ಭವಿಷ್ಯವನ್ನು ನಿರ್ಧರಿಸಲಿದೆ.
ಶೇಕಡ 50 ರಷ್ಟು ಬೆಡ್ ಗಳನ್ನು ಮೀಸಲಿಡದ ಆಸ್ಪತ್ರೆಗಳಿಗೆ ನೋಟೀಸ್ ನೀಡಲಾಗಿದ್ದು ಇದುವರೆಗೂ ಸಮರ್ಪಕ ಉತ್ತರ ನೀಡದ ಕಾರಣ ಆಸ್ಪತ್ರೆಗಳನ್ನು ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.