ಬೆಂಗಳೂರು: ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಲಕ್ಷ್ಮೀ ತಂದೆ ವೆಂಕಟೇಶ್ ನೀಡಿದ್ದ ದೂರಿನ ಆಧಾರದ ಮೇಲೆ ಮನು, ಪ್ರಜ್ವಲ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಡಿವೈ ಎಸ್ ಪಿ ಲಕ್ಷ್ಮೀ ಸ್ನೇಹಿತರಾಗಿರುವ ಮನು, ಪ್ರಜ್ವಲ್ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 174(3) ಅಡಿ ಪ್ರಕರಣ ದಾಖಲಾಗಿತ್ತು.
ಲಕ್ಷ್ಮೀ ತಂದೆ ವೆಂಕಟೇಶ್, ತಮ್ಮ ಮಗಳ ಸಾವಿನ ಬಗ್ಗೆ ಹಲವು ಅನುಮಾನವಿದೆ. ಮನು ಹಾಗೂ ಪ್ರಜ್ವಲ್ ಅವರ ಹೇಳಿಕೆಗಳೂ ಸಾಕಷ್ಟು ಶಂಕೆ ತರುತ್ತಿದೆ ಎಂದು ಆರೋಪಿಸಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.