
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಇದಿಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮನಗರದ ಬಳಿಯ ಜಯಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಡೈವೈಡರ್ ಹಾರಿ ಪಕ್ಕದ ರಸ್ತೆಗೆ ಬಸ್ ಹೋಗಿ ನಿಂತಿದೆ. ಬಸ್ ಚಾಲಕ ಸಾವನ್ನಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.