ಕೊಪ್ಪಳ: ವೃದ್ಧರು ಇನ್ನು ಮುಂದೆ ಪಿಂಚಣಿಗಾಗಿ ಅರ್ಜಿ ಸಲ್ಲಿಸಬೇಕಿಲ್ಲ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಗಳಲ್ಲಿ ಇರುವ ವಯಸ್ಸಿನ ಆಧಾರದ ಮೇಲೆ ತಹಶೀಲ್ದಾರ್ ಪತ್ರ ಕಳುಹಿಸಿ ಪಿಂಚಣಿ ಪಡೆಯಲು ವ್ಯವಸ್ಥೆ ಕಲ್ಪಿಸಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾತನಾಡಿ, ಅಂಚೆ ಮೂಲಕ ತಲುಪಿಸುತ್ತಿದ್ದ ಪಿಂಚಣಿಯ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಇನ್ನು ಮುಂದೆ ಆಧಾರ್ ಜೋಡಣೆ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಿಂಚಣಿ ಹಣ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆಧಾರ್ ಜೋಡಣೆ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಿಂಚಣಿ ಹಣ ಜಮೆ ಮಾಡಲಾಗುವುದು. ಪಿಂಚಣಿಗಾಗಿ ವೃದ್ಧರು ಅರ್ಜಿ ಸಲ್ಲಿಸಬೇಕಿಲ್ಲ. ಪಡಿತರ ಚೀಟಿ, ಆಧಾರ್ ಕಾರ್ಡ್ ನಲ್ಲಿರುವ ವಯಸ್ಸಿನ ಆಧಾರದ ಮೇಲೆ ತಹಶೀಲ್ದಾರ್ ಪತ್ರ ಕಳುಹಿಸಿ ಪಿಂಚಣಿಗೆ ಆದೇಶ ಮಾಡಲಿದ್ದಾರೆ. ಈಗಾಗಲೇ ಬಳ್ಳಾರಿ ಮತ್ತು ಉಡುಪಿ ಜಿಲ್ಲೆಯಲ್ಲಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಆರು ತಿಂಗಳು ಪಿಂಚಣಿ ಹಣ ಪಡೆಯದಿದ್ದರೆ ಪಿಂಚಣಿಯನ್ನು ಸ್ಥಗಿತಗೊಳಿಸಲಾಗುವುದು. ಶೇಕಡ 5 ರಿಂದ 7 ರಷ್ಟು ಫಲಾನುಭವಿಗಳು ಬೋಗಸ್ ಇರುವ ಬಗ್ಗೆ ಮಾಹಿತಿಯಿದ್ದು ಅಂಚೆ ಇಲಾಖೆಯಿಂದ ಬ್ಯಾಂಕ್ ಖಾತೆಗೆ ಪಿಂಚಣಿ ಜಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.