ಬೆಂಗಳೂರು: ಸೆಪ್ಟೆಂಬರ್ 1ರಿಂದ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಪಬ್ ಓಪನ್ ಮಾಡಲು ಅನುಮತಿ ನೀಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಾರ್ ಓಪನ್ ಮಾಡಲು ಒಪ್ಪಿಗೆ ನೀಡಿದ್ದಾರೆ. ಶೇಕಡ 50 ರಷ್ಟು ಗ್ರಾಹಕರೊಂದಿಗೆ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಮಾಡಬಹುದು ಎಂದು ಹೇಳಲಾಗಿದೆ.
ನಾಳೆ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಶೇಕಡ 50 ರಷ್ಟು ಗ್ರಾಹಕರು ಮಾತ್ರ ಇರಲು ಅವಕಾಶವಿದ್ದು ಕೋವಿಡ್ ಕುರಿತಾದ ಎಲ್ಲಾ ಮಾರ್ಗಸೂಚಿಗಳ ಪಾಲನೆ ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.