alex Certify ಬಂಡಾಯದ ವಿರುದ್ಧ ಬಿಜೆಪಿ ಕ್ರಮ: ಮಲ್ಲಿಕಾರ್ಜುನ ಖೂಬಾಗೆ ಪಕ್ಷದಿಂದ ಉಚ್ಛಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಡಾಯದ ವಿರುದ್ಧ ಬಿಜೆಪಿ ಕ್ರಮ: ಮಲ್ಲಿಕಾರ್ಜುನ ಖೂಬಾಗೆ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷದ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಖೂಬಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಖೂಬಾಗೆ ಟಿಕೆಟ್ ನೀಡದೇ ಶರಣು ಸಲಗಾರ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಇದರಿಂದ ಬೇಸರಗೊಂಡಿದ್ದ ಮಲ್ಲಿಕಾರ್ಜುನ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಖೂಬಾ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...