
ಬೆಂಗಳೂರು: ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1567 ಹುದ್ದೆಗಳ ನೇಮಕಾತಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
1222 ಅಗ್ನಿಶಾಮಕ, 227 ಅಗ್ನಿಶಾಮಕ ಚಾಲಕ, 82 ತಂತ್ರಜ್ಞರು, 36 ಠಾಣಾಧಿಕಾರಿ ಹುದ್ದೆಗಳಿಗೆ 100 ದಿನಗಳಲ್ಲಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಅಗ್ನಿಶಾಮಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಬಸವರಾಜ ಬೊಮ್ಮಾಯಿ, ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1567 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವಂತೆ ಅಗ್ನಿಶಾಮಕ ಇಲಾಖೆ ಡಿಜಿಪಿಗೆ ಸೂಚನೆ ನೀಡಿದ್ದಾರೆ.